ನೀಟ್ ಪತ್ರಿಕೆ ಸೋರಿಕೆ : ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಗೋಣಿಕೊಪ್ಪ:ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಕೈಗೊಂಡ ಪ್ರತಿಭಟನೆಗೆ ಬೆಂಬಲವಾಗಿ ಹಾಗೂ ಕೇಂದ್ರ ಬಿಜೆಪಿ ನಾಯಕತ್ವ ಮತ್ತು ಪೊಲೀಸರು, ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯದ ವಿರುದ್ದ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಯಿತು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿದ ಈ ಪ್ರತಿಭಟನೆಯಲ್ಲಿ, ಜಿಲ್ಲಾ ಅಧ್ಯಕ್ಷರರಾದ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ಬ್ಲಾಕ್ ಮಹಿಳಾ ಅಧ್ಯಕ್ಷರುಗಳು ಆಶಾ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರುಗಳು ಟಾಟು ಮೊಣಪ್ಪ, ಜಿಲ್ಲಾಅಲ್ಪಸಂಖ್ಯಾತರ ಘಟದ ಅಧ್ಯಕ್ಷರಾದ ಹನೀಫ್, ಹಾಗೂ ಪದಾಧಿಕಾರಿಗಳು, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು,ಪದಾಧಿಕಾರಿಗಳು, ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಬೂತ್ ಅಧ್ಯಕ್ಷರುಗಳು ಪದಾಧಿಕಾರಿಗಳು, ಸಾಮಾಜಿಕ ಜಾಲತಾಣದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಸ್ ಟಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಓ ಬಿ ಸಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಯೂತ್ ಕಾಂಗ್ರೆಸ್ ಅಧ್ಯಕ್ಷರುಗಳು,ಪದಾಧಿಕಾರಿಗಳು, ಹಾಗೂ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಎಸೆಗಿದ ದೌರ್ಜನ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ಘೋಷಣೆ ಕೂಗಿದರು.
ಶಾಸಕರಾದ ಪೊನ್ನಣ್ಣ ರವರು ಮಾತನಾಡಿ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದ್ದು ಇದು ಅತ್ಯಂತ ಖಂಡನೀಯ. ವಿದ್ಯಾರ್ಥಿಗಳು ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಸಾಧ್ಯವಾಗದೆ ಅವರನ್ನು ಉಗ್ರಮಗಾಮಿಗಳು ಎಂದು ಬಣ್ಣಿಸಿರುವುದು ಪ್ರಜಾಪ್ರಭುತ್ವದ ದುರಂತ ಎಂದು ಹೇಳಿದ ಶಾಸಕರು, ವಿದ್ಯಾರ್ಥಿಗಳಿಗೆ ಮತ್ತು ದೇಶಕ್ಕೆ ಇದಕ್ಕಿಂತ ದೊಡ್ಡ ಅನ್ಯಾಯ ಇನ್ನೊಂದಿಲ್ಲ ಎಂದು ಬಣ್ಣಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್, ಪೊನ್ನಂಪೇಟೆ ಪ್ರಚಾರ ಸಮಿತಿ, ಪೊನ್ನಂಪೇಟೆ ಯುವ ಕಾಂಗ್ರೆಸ್ ಹಾಗೂ ಪೊನ್ನಂಪೇಟೆ ಎಲ್ಲಾ ಘಟಕಗಳ ಸಹಯೋಗದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
