ವಿರಾಜಪೇಟೆ ಶಾಸಕರ ಕಛೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ವಿರಾಜಪೇಟೆ; ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಶಾಸಕರ ಗೃಹ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.
ಶಾಸಕ ಪೊನ್ನಣ್ಣ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, "ಆಧುನಿಕ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ಅಂದಿನ ಕಾಲದಲ್ಲೇ ಸೌಹಾರ್ದ, ಸಮೃದ್ಧ ನಾಡಿನ ಕನಸು ಕಂಡಿದ್ದರು. ಅವರ ದೂರದೃಷ್ಟಿಯ ಫಲವಾಗಿ ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ರಾಜ್ಯದ ರಾಜಧಾನಿಯಾಗಿ ಹೆಸರು ಪಡೆದಿದೆ. ಕೆಂಪೇಗೌಡರ ತ್ಯಾಗ, ಕಠಿಣ ಪರಿಶ್ರಮ ನಮಗೆಲ್ಲರಿಗೂ ಮಾದರಿ. ಅವರ ಆದರ್ಶಗಳನ್ನು ಪಾಲಿಸುವುದರಿಂದ ಉತ್ತಮ ನಾಡು ನಿರ್ಮಾಣ ಸಾಧ್ಯ" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ, ತಾಲ್ಲೂಕು ಕೆಡಿಪಿ ಸದಸ್ಯ ರಫೀಕ್, ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಆಲಿರ ರಶೀದ್, ಮುಖಂಡರಾದ ಸೂರಜ್ ಹೊಸೂರು, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ, ಬಟ್ಟಕಾಳಂಡ ರಾಜ ದಿನೇಶ್, ಕೆಟೊಳಿ ಮೋಹನ್ ರಾಜ್, ವರ್ಗಿಸ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
