ನಾಪೋಕ್ಲು: ಬೇತು ಹಾಗೂ ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಸ್ತನ್ಯಪಾನ ಕಾರ್ಯಕ್ರಮ

ನಾಪೋಕ್ಲು: ಬೇತು ಹಾಗೂ ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಸ್ತನ್ಯಪಾನ ಕಾರ್ಯಕ್ರಮ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಹಾಗೂ ಇಂದಿರಾ ನಗರದ ಅಂಗನವಾಡಿ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಇಂದಿರಾನಗರದ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎದೆಹಾಲಿನ ಮಹತ್ವದ ಬಗ್ಗೆ ಹಾಗೂ ಆರೋಗ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಬೇತು ಹಾಗೂ ಇಂದಿರಾನಗರದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಆಶಾ ಹಾಗೂ ಸೀಮಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ನಡೆಸಲಾಯಿತು.

.ಈ ಸಂದರ್ಭ ಕಾರ್ಯಕ್ರಮ ದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳಾದ ಯಮುನ, ರೋಜಾ, ಆಶಾ ಕಾರ್ಯಕರ್ತೆಯರಾದ ಗಾಯತ್ರಿ,ಬಿನಿಷ, ಸೈನಾಝ್ ಬಾನು, ಸಹಾಯಕಿಯರಾದ ಸುಶೀಲಾ, ಅಂಗನವಾಡಿ ವ್ಯಾಪ್ತಿಯ ಗರ್ಭಿಣಿ ಬಾಣಂತಿಯರು, ಪೋಷಕರು ಮಕ್ಕಳು ಹಾಗೂ ಗ್ರಾಮಸ್ಥರು ಹಾಜರಿದ್ದರು.