Kodagu

ನಾಪೋಕ್ಲು: ಡಾ. ಬಿ. ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಕೆ. ಡಿ.ನೀತಾ ಅವರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ಧ್ವಜ ಗೀತೆಯನ್ನು ಹಾಡಿದರು. ಬಳಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಲೆಯ ಪ್ರಾಂಶುಪಾಲರಾದ ನೀತಾ ಅವರು ಮಾತನಾಡಿ ವಿದ್ಯಾರ್ಥಿಗಳು ಮುಂದಿನ ಪೀಳಿಗೆಯ ಉಳಿಯುವಿಕೆಗೆ ಪ್ರಸ್ತುತ ಜಗತ್ತಿನಲ್ಲಿ ಜಾಗರೂಕರಾಗಿ ಇರಬೇಕೆಂದು ಕಿವಿಮಾತು ಹೇಳಿದರು.

 ಶಾಲೆಯ ದೈಹಿಕ ಶಿಕ್ಷಕಿ ಶ್ಯಾಮಿಲಿ ಅವರು ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆದು ನೋಡುಗರನ್ನು ರಂಜಿಸಿತು. ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು,ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಅಮೃತ ತಂಡದವರು ಪ್ರಾರ್ಥಿಸಿದರು.ಶಾಲಾ ಕ್ರೀಡಾ ನಾಯಕ ಹಾರ್ದಿಕ್ ನಿರೂಪಿಸಿದರು.ವಿದ್ಯಾರ್ಥಿಗಳಾದ ತೀರ್ಥ ಸ್ವಾಗತಿಸಿ,ಸೆರಾಜ್ ಗೌತಮ್ ವಂದಿಸಿದರು.