ನಾಪೋಕ್ಲು: ಗದ್ದೆಯಲ್ಲಿ ಕಾಣಿಸಿ ಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಉರಗತಜ್ಞ ಸ್ನೇಕ್ ಪ್ರಜ್ವಲ್

ನಾಪೋಕ್ಲು: ಗದ್ದೆಯಲ್ಲಿ ಕಾಣಿಸಿ ಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಉರಗತಜ್ಞ ಸ್ನೇಕ್ ಪ್ರಜ್ವಲ್

ವರದಿ:ಝಕರಿಯ ನಾಪೋಕ್ಲು

 ನಾಪೋಕ್ಲು :ನಾಪೋಕ್ಲು ಬಳಿಯ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಅಪ್ಪುಮಣಿಯಂಡ ರಘು ಸುಬ್ಬಯ್ಯ ಎಂಬುವರ ಗದ್ದೆಯಲ್ಲಿ ಹತ್ತು ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಂಡುಬಂದಿದೆ. ಸರ್ಪವನ್ನು ಕಂಡು ಭಯಭೀತರಾದ ಮನೆ ಮಂದಿ ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಬಳಿಕ ಮೂರ್ನಾಡಿ ನ ಉರ್ಗತಜ್ಞ ಸ್ನೇಕ್ ಪ್ರಜ್ವಲ್ ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮಾಕುಟ್ಟ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭ ಭಾಗಮಂಡಲ ಉಪವಲಯ ಅರಣ್ಯ ಇಲಾಖೆಯ ಅಧಿಕಾರಿ ಕಾಳೆ ಗೌಡ, ಹಾಗೂ ಸಿಬ್ಬಂದಿಗಳು ಹಾಜರಿದ್ದರು.