ನಾಪೋಕ್ಲು:ಬೇತು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
admincoorgdaily
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲು ಬಳಿಯ ಬೇತು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷೆ ಧರಣಿಯವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕಿ ಬಿ. ಪಿ.ಮಮತ ಅವರು ಸರ್ವರನ್ನು ಸ್ವಾಗತಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ದೇಶಭಕ್ತಿ ಗೀತೆ, ಭಾಷಣ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಶಾಲೆಯ ಹಿರಿಯ ಶಿಕ್ಷಕಿ ಬಿ.ಬಿ.ಸಾವಿತ್ರಿ ಅಥಿತಿ ಶಿಕ್ಷಕಿಯರು,ಹಳೇ ವಿದ್ಯಾರ್ಥಿ ವಿನಿಲ್ (ಪಪ್ಪು), ಎಸ್ ಡಿಎಂಸಿ ಸದಸ್ಯರು, ಬೇತು ಅಂಗನವಾಡಿ ಶಿಕ್ಷಕಿ ಆಶಾ,ಸಹಾಯಕಿ ಲೀಲಾವತಿ,ದಮಯಂತಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.