ನಾಪೋಕ್ಲು :ಚೆರಿಯಪರಂಬು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲು ಬಳಿಯ ಚೆರಿಯಪರಂಬುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪರವಂಡ ರಶೀದ್ ಅವರು ದ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಹಾಜರ ಹಾಗೂ ಶಾಲೆಯ ಅಧ್ಯಕ್ಷ ರಶೀದ್ ದಿನದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ, ಚದ್ಮವೇಷ ಸೇರಿದಂತೆ ವಿವಿಧ ಸಾಂಸ್ಕೃಕ ಕಾರ್ಯಕ್ರಮ ನಡೆದು ಗಮಮನ ಸೆಳೆಯಿತು. ಬಳಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿ ಸಿಹಿಹಂಚಿ ಸಂಭ್ರಮಿಸಿದರು ಈ ಸಂದರ್ಭ ಕಾರ್ಯಕ್ರಮದಲ್ಲಿ ಎಸ್ ಡಿಎಂ ಸಿ ಉಪಾಧ್ಯಕ್ಷರಾದ ಶಂಕರ, ಶಾಲೆಯ ಶಿಕ್ಷಕರಾದ ಶಾರದಾ,ನೇತ್ರಾವತಿ,ಪುಷ್ಪ,dar ಧರ್ಮೇಂದ್ರ, ಎಸ್ ಡಿಎಂಸಿ ಸದಸ್ಯರಾದ ನಾರಾಯಣ, ಪ್ರಶಾಂತ್, ಪ್ರಿಯ, ಹಾರಿಫ,ಸಮೀರಾ,ರಾಜಮ್ಮ ಹಾಗೂ ಶೌರ್ಯ ತಂಡದ ಸದಸ್ಯರು,ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.