ನಾಪೋಕ್ಲು; ಏ.1 ರಂದು ಮದ್ಯ ಮಾರಾಟ ನಿಷೇಧ
admincoorgdaily

ಮಡಿಕೇರಿ:-ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದು ಜನ ಜಾಗೃತಿ ಸಮಾವೇಶ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್ 1 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಾಪೋಕ್ಲು ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್‍ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.