ನಾಪೋಕ್ಲು: ಆಟೋ ಚಾಲಕರಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ನಾಪೋಕ್ಲು: ಆಟೋ ಚಾಲಕರಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ವರದಿ:ಝಕರಿಯ ನಾಪೋಕ್ಲು

 ನಾಪೋಕ್ಲು :ನಾಪೋಕ್ಲುವಿನ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣ ಆಟೋ ನಿಲ್ದಾಣದಲ್ಲಿ ಸಂಘದ ಅಧ್ಯಕ್ಷರಾದ ಟಿ.ಪಿ. ಸುಕುಮಾರ್ ರವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ಸಾರ್ವಜಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಅಬ್ದುಲ್ ರಜಾಕ್, ಕಾರ್ಯದರ್ಶಿ ಸತೀಶ್,ಸೇರಿದಂತೆ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು,ಸರ್ವ ಸದಸ್ಯರು ಹಾಜರಿದ್ದರು.