ಶಾಸಕ ಎ‌ಎಸ್ ಪೊನ್ನಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧ ಬಳಕೆ:ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸಕೋಡಿ ಖಂಡನೆ

ಶಾಸಕ ಎ‌ಎಸ್ ಪೊನ್ನಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧ ಬಳಕೆ:ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸಕೋಡಿ ಖಂಡನೆ

ಮಡಿಕೇರಿ: ಸಾಮಾಜಿಕ ಜಾಲತಾಣದ ಫೇಸ್ ಬುಕ್‌ನಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಬಗ್ಗೆ ಅವಹೇಳನಕಾರಿ ಅವಾಚ್ಯ ಶಬ್ಧ ಬಳಕೆಗೆ ಯುವ ಕಾಂಗ್ರೆಸ್‌ನ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಹಂಸಕೋಡಿ ಖಂಡನೆ ವ್ಯಕ್ತಪಡಿಸಿದ್ದಾರೆ.

 ಬಿಹಾರ ಚುನಾವಣೆಯ ಫಲಿತಾಂಶದ ಕುರಿತು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಸುದ್ದಿಗಾರರಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಕೆಲವು ವ್ಯಕ್ತಿಗಳು ಅವಾಚ್ಯ ಶಬ್ಧ ಬಳಕೆ ಸೇರಿದಂತೆ ಕುಟುಂಬಸ್ಥರ ತೇಜೋವಧೆ ಮಾಡಿದ್ದರು. ಇದು ಖಂಡನೀಯ ಎಂದ ಅವರು, ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಮರುಕಳಿಸಿದ್ದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್‌ನ ನಾಪೋಕ್ಲು ಬ್ಲಾಕ್ ವತಿಯಿಂದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿರಾಜ್, ಪ್ರಮುಖರಾದ ಕಿಶೋರ್ ದಬ್ಬಡ್ಕ, ಗೌರಿಶ್ ರೈ ಉಪಸ್ಥಿತರಿದ್ದರು.