ನಾಪೋಕ್ಲು: ವಿಶೇಷ ಚೇತನರಿಗಾಗಿ ಆರೋಗ್ಯ ಶಿಬಿರ
ಮಡಿಕೇರಿ, ಜುಲೈ 14: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಮಡಿಕೇರಿ, ಸಮುದಾಯ ವೈದ್ಯಶಾಸ್ತ್ರ ವಿಭಾಗ ಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್, ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನರಿಗಾಗಿ ಆರೋಗ್ಯ ಶಿಬಿರವನ್ನು ಮಂಗಳವಾರ ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ರಾಮಚಂದ್ರ ಕಾಮತ್ ರವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ವಿಶೇಷ ಚೇತನರಿಗೆ ಗುಣಮಟ್ಟದ ಹಾಗೂ ಸಮಾನ ಆರೋಗ್ಯ ಸೇವೆಗಳನ್ನು ತಲುಪಿಸುವ ಅಗತ್ಯವನ್ನು ಒತ್ತಿಹೇಳಿದರು. ಸಮಾಜದ ಎಲ್ಲ ವರ್ಗಗಳ ಸಹಕಾರದಿಂದ ವಿಶೇಷ ಚೇತನರ ಆರೋಗ್ಯ, ಶಿಕ್ಷಣ ಮತ್ತು ಪುನರ್ವಸತಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀಮತಿ ವಿಮಲಾ ಬಿ.ಆರ್, ನಾಪೋಕ್ಲು ಗ್ರಾಮ ಪಂಚಾಯಿತಿ ಯಿಂದ ಬಿ.ಬಿ ಸುಬ್ಬಯ್ಯ , ಓಂಪ್ರಕಾಶ್ VRW ಸಪೋರ್ಟ್ ರವರು ಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಬಾಳೆಯಡ ದಿವ್ಯಾ ಭಾಗವಹಿಸಿ ಮಾತನಾಡಿದರು.
ಸರ್ಕಾರದಿಂದ ವಿಶೇಷ ಚೇತನರಿಗಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಪುನರ್ವಸತಿ ಸೇವೆಗಳ ಕುರಿತು ಮಾಹಿತಿ ನೀಡಿ, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ, ಆರೋಗ್ಯ ಶಿಕ್ಷಣ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಶಿಬಿರದಲ್ಲಿ ಭಾಗವಹಿಸಿದ್ದ ಫಲಾನುಭವಿಗಳು ಆರೋಗ್ಯ ಸೇವೆಗಳ ಪ್ರಯೋಜನ ಪಡೆದುಕೊಂಡರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
