ನಾಪೋಕ್ಲು; ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ನಾಪೋಕ್ಲು ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳ ಕಲಿಕಾ ಹಬ್ಬ

Jan 28, 2026 - 21:39
 0  163
ನಾಪೋಕ್ಲು; ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ನಾಪೋಕ್ಲು ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳ  ಕಲಿಕಾ ಹಬ್ಬ

ವರದಿ :ಝಕರಿಯ ನಾಪೋಕ್ಲು

 ನಾಪೋಕ್ಲು :ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ನಾಪೋಕ್ಲು ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಎಸ್ ಎಲ್ ಎನ್ ಕಲಿಕಾ ಹಬ್ಬ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

 ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ ಕಾಮಗಾರಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕೆ.ಎ.ಹಾರಿಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಕಲಿಕಾ ಹಬ್ಬ ಕೂಡ ಅದರ ಒಂದು ಭಾಗವಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇದು ಒಂದು ಉತ್ತಮ ಅವಕಾಶವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಡಲು ಪ್ರಾಥಮಿಕ ಅಂತದಲ್ಲೇ ಭದ್ರ ಬುನಾದಿ ಹಾಕಿ ಕೊಡಲು ಶಿಕ್ಷಕರೊಂದಿಗೆ ಪೋಷಕರ ಕರ್ತವ್ಯವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು.

 ಬಿ ಆರ್ ಪಿ ಮಂಜುಳ ಚಿತ್ರಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಲಿಕಾ ಹಬ್ಬವು ಸಂತೋಷದಾಯಕ ಹಾಗೂ ಅನುಭವಯುಕ್ತ ಕಲಿಕೆಯ ವಾತಾವರಣವನ್ನು ಪ್ರೇರೇಪಿಸುತ್ತದೆ. ಮಕ್ಕಳ ಕಲಿಕೆಯ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಎಫ್ ಎಲ್ ಎನ್ ನಲ್ಲಿ ಮಕ್ಕಳು ಸಾಧಿಸಿರುವ ಕಲಿಕಾ ಫಲಗಳನ್ನು ತಿಳಿಯಲು ಇದು ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದರು.

ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಅವರು ಪ್ರಾಥಮಿಕ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶಾಲೆಯ ಶೈಕ್ಷಣಿಕ ಗುಣಮಟ್ಟ ಖಾತರಿ ಸಮಿತಿ ಅಧ್ಯಕ್ಷರಾದ ಕೇಟೋಳಿರ ರಾಜ ಗಣಪತಿ, ಕಕ್ಕಬ್ಬೆ ಕ್ಲಸ್ಟರ್ ಸಿಆರ್ ಪಿ ಕಲ್ಪನಾ , ಶಾಲೆಯ ಮುಖ್ಯ ಶಿಕ್ಷಕಿ ನಳಿನಿ, ನಾಪೋಕ್ಲು ಕ್ಲಸ್ಟರ್ ಗೆ ಒಳಪಟ್ಟ 12 ಶಾಲೆಯ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0