Kodagu

ನಾಪೋಕ್ಲು:ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

admincoorgdaily

ನಾಪೋಕ್ಲು:ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಈ ಭಾಗದಲ್ಲಿ ಶಾಸಕರು ಒದಗಿಸಿಕೊಟ್ಟ ಅಂದಾಜು ₹ 40 ಲಕ್ಷಗಳಲ್ಲಿ, ಹಲವಾರು ರಸ್ತೆಗಳ ಕಾಮಗಾರಿ ಪ್ರಾರಂಭಿಸಲು ಭೂಮಿ ಪೂಜೆ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಈಗಾಗಲೇ ಪೂರ್ಣಗೊಂಡಿರುವಂತಹ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ವಲಯ ಅಧ್ಯಕ್ಷರು ಕುಶಾಲಪ್ಪ, ಹಿರಿಯರು ಬಿದ್ದತಂಡ ತಮ್ಮಯ್ಯ, ಪಂಚಾಯಿತಿ ಅಧ್ಯಕ್ಷರು ವನಜಾಕ್ಷಿ, ಸದಸ್ಯರು ಅರುಣ್ ಬೇಬ, ಶಾಬಾ ತಿಮ್ಮಯ್ಯ, ಹೇಮಾವತಿ, ಕಕ್ಕಬೆ ಪಂಚಾಯಿತಿ ಸದಸ್ಯರು ಕಲಿಯಂಡ ಸಂಪನ್ ಅಯ್ಯಪ್ಪ, ಕೌಶಿಕ್,ದೀಪು, ವಾಸಿಮ್, ಹ್ಯಾರೀಶ್, ಗ್ಯಾರಂಟಿ ಅನುಷ್ಠಾನ ಸದಸ್ಯರು ಸಿರಾಜ್ ಪರವಂಡ, ಉಬೈದುಲ್ಲಾ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.