ನಾಪೋಕ್ಲು;ಗಾಂಜಾ ಸೇವನೆ ಮೂವರು ಅಸ್ಸಾಂ ಕಾರ್ಮಿಕರ ಬಂಧನ

Jan 21, 2026 - 11:23
 0  856
ನಾಪೋಕ್ಲು;ಗಾಂಜಾ ಸೇವನೆ ಮೂವರು ಅಸ್ಸಾಂ ಕಾರ್ಮಿಕರ ಬಂಧನ

ವರದಿ:ಝಕರಿಯ ನಾಪೋಕ್ಲು

 ನಾಪೋಕ್ಲು :ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡುತ್ತಿದ್ದ ಅಸ್ಸಾಂಮೂಲದ ಮೂವರು ಕಾರ್ಮಿಕರನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ರಾಜ್ಯದ ದರಾಂಗ್ ಜಿಲ್ಲೆಯ ನಿವಾಸಿಗಳಾದ ಸಾದಿಕ್ ಅಲಿ (35)ಸೈದುಲ್ ರಹ್ಮಾನ್ (27)ನೂರ್ ಮೊಹಮ್ಮದ್(25) ಬಂಧಿತ ಆರೋಪಿಗಳು.

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೂರುಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಹಾಗೂ ಬೇತು ಗ್ರಾಮಕ್ಕೆ ತೆರಳುವ ರಸ್ತೆಯ ಜಂಕ್ಷನ್ ಬಳಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

 ಬಳಿಕ ಇವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೂವರು ಗಾಂಜ ಸೇವನೆ ಮಾಡಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.ನಾಪೋಕ್ಲು ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಪಿ. ಜಿ. ರಾಘವೇಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮಾದಕ ವಸ್ತು ಸೇವನೆ ಹಾಗೂ ಮಾರಾಟ ಮಾಡುತ್ತಿರುವವರ ಬಗ್ಗೆ ತಿಳಿದು ಬಂದಲ್ಲಿ ಸಾರ್ವಜನಿಕರು ನಾಪೋಕ್ಲು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೋಲಿಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 4
Dislike Dislike 0
Love Love 1
Funny Funny 3
Angry Angry 2
Sad Sad 1
Wow Wow 2