Kodagu

ನಾಪೋಕ್ಲು: ನಾಲಡಿಯಲ್ಲಿ ಕಾಡಾನೆ ಮೃತದೇಹ ಪತ್ತೆ

admincoorgdaily

ನಾಪೋಕ್ಲು: ನಾಲಡಿಯಲ್ಲಿ ಕಾಡಾನೆ ಮೃತದೇಹ ಪತ್ತೆ

ನಾಪೋಕ್ಲು: ಕುಂಜಿಲ-ಕಕ್ಕಬ್ಬೆ ನಾಲಡಿ ಗ್ರಾಮದ ಪರದಂಡ ಡಾಲಿ ಎಂಬುವರ ಕಾಫಿ ತೋಟದಲ್ಲಿ ಮಂಗಳವಾರ ಬೆಳಿಗ್ಗೆ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಡಾಲಿ ಅವರ ತೋಟದ ಕಾರ್ಮಿಕರು ಇಂದು ಬೆಳಿಗ್ಗೆ ಆನೆ ಮೃತಪಟ್ಟಿರುವುದನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆನೆಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬರಬೇಕಾಗಿದೆ.