ನಾಪೋಕ್ಲು: ಸ್ಟಾಕ್ ಮಾರ್ಕೆಟ್ ನಲ್ಲಿ ನಷ್ಟ ಯುವಕ ಗುಂಡು ಹೊಡೆದು ಆತ್ಮಹತ್ಯೆ

Jul 11, 2026 - 11:37
Jul 11, 2026 - 11:55
 0  2.3k
ನಾಪೋಕ್ಲು: ಸ್ಟಾಕ್ ಮಾರ್ಕೆಟ್ ನಲ್ಲಿ ನಷ್ಟ ಯುವಕ ಗುಂಡು ಹೊಡೆದು ಆತ್ಮಹತ್ಯೆ

ನಾಪೋಕ್ಲು : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

 ಕುಂಬಳದಾಳು ಗ್ರಾಮದ ನಿವಾಸಿ ಕವನ್ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಯುವಕ ಷೇರು (ಸ್ಟಾಕ್) ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡಿದ್ದ ಹಿನ್ನೆಲೆ ಮನನೊಂದು ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಏನೆಂಬುದು ಇನ್ನೂ ದೃಢಪಟ್ಟಿಲ್ಲ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

What's Your Reaction?

Like Like 2
Dislike Dislike 1
Love Love 0
Funny Funny 0
Angry Angry 1
Sad Sad 8
Wow Wow 0