ನಾಪೋಕ್ಲುವಿನಲ್ಲಿ ಹಲ್ಲೆ ಪ್ರಕರಣ;ಆರೋಪಿಗಳನ್ನು ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಎಂಎಲ್‌ಸಿ ಸುನಿಲ್ ಸುಬ್ರಮಣಿ ಆಗ್ರಹ

Feb 28, 2026 - 19:56
 0  650
ನಾಪೋಕ್ಲುವಿನಲ್ಲಿ ಹಲ್ಲೆ ಪ್ರಕರಣ;ಆರೋಪಿಗಳನ್ನು ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಎಂಎಲ್‌ಸಿ ಸುನಿಲ್ ಸುಬ್ರಮಣಿ ಆಗ್ರಹ

ಮಡಿಕೇರಿ: ನಾಪೋಕ್ಲುವಿನಲ್ಲಿ ಹಿಂದು ಯುವಕನ ಮೇಲೆ ಅನ್ಯಕೋಮಿನ ಯುವಕರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಖಂಡನೀಯವಾಗಿದ್ದು, ಸಂಬಂಧಪಟ್ಟ ಆರೋಪಿಗಳನ್ನು ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಎಂಎಲ್‌ಸಿ ಸುನಿಲ್ ಸುಬ್ರಮಣಿ ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂತಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಹಿಂದೂಗಳನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ಅಲ್ಲದೇ, ಒಂದು ವರ್ಗವನ್ನು ಓಲೈಕೆ ಮಾಡುವ ಸಲುವಾಗಿ ಇಲ್ಲಿನ ನಾಯಕರು ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದ ಅವರು, ಹಿಂದು ಯುವಕನ ಮೇಲೆ ಹಲ್ಲೆ ನಡೆಸಿರುವವರನ್ನು ಜಿಲ್ಲೆಯಿಂದ ಗಡಿಪಾರು ಮಾಡುಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಎಲ್ಲೆಡೆ ಯಶಸ್ವಿಯಾಗಿ ವಿರಾಟ ಹಿಂದೂ ಸಂಗಮ ಕಾರ್ಯಕ್ರಮ ನಡೆದಿದೆ. ನಾಪೋಕ್ಲುವಿನಲ್ಲಿ ಕಾರ್ಯಕ್ರಮವನ್ನು ಹಾಳುಮಾಡುವ ದೃಷ್ಠಿಯಲ್ಲಿ ಕಾರ್ಯಕ್ರಮದ ಪ್ರಚಾರದ ವೇಳೆ ಪ್ರಶ್ನಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ದುಷ್ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಆಗ್ರಹಿಸಿದರು.

 ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಅರುಣ್ ಕುಮಾರ್, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ಅಜಿಲ್ ಕೃಷ್ಣನ್ ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 4
Angry Angry 0
Sad Sad 0
Wow Wow 0