Kodagu

ನಾಪೋಕ್ಲು ಹಲ್ಲೆ ಘಟನೆ ಖಂಡನೀಯ;ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮನವಿ

admincoorgdaily

ಧರ್ಮಜ ಉತ್ತಪ್ಪ

ಮಡಿಕೇರಿ; ನಾಪೋಕ್ಲುವಿನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಆರೋಪಿಗಳು ಎಷ್ಟೇ ಪ್ರಭಾವಶಾಲಿಗಾರೂ ಅವರ ಮೇಲೆ ಕಾನೂನು ಕ್ರಮ ಜರುಗುತ್ತದೆ.

ಪ್ರಜಾಪ್ರಭುತ್ವದಲ್ಲಿ ಎಲ್ಲ ಧರ್ಮದವರಿಗೂ ಕೂಡ ಅವರವರ ಸಮಾವೇಶ, ಸಂಗಮ ಮಾಡಿಕೊಳ್ಳಲು ಅವಕಾಶವಿದೆ, ಇಂದು ನಡೆದ ಹಲ್ಲೆ ನಿಜಕ್ಕೂ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಧರ್ಮಜ ಉತ್ತಪ್ಪ ಅವರು ಹೇಳಿದ್ದಾರೆ.

 ಜಿಲ್ಲೆಯ ವಿವಿಧಡೆ ಎಲ್ಲಾ ಕಡೆ ಶಾಂತಿಯಿಂದ ಹಿಂದು ಸಂಗಮ ನಡೆಯುತ್ತಿದ್ದಾಗ ನಾಪೋಕ್ಲುವಿನ ಹಲ್ಲೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ.ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವಂತೆ ಧರ್ಮಜ ಉತ್ತಪ್ಪ ಇದೇ ಸಂದರ್ಭ ಮನವಿ ಮಾಡಿದ್ದಾರೆ.