ನಾಪೋಕ್ಲು: ಇಂದಿರಾನಗರ ಬಡಾವಣೆಯಲ್ಲಿ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್ ಪೊನ್ನಣ್ಣ
ನಾಪೋಕ್ಲು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರ ಬಡಾವಣೆಯಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆಯ ಲೋಕಾರ್ಪಣೆ ನೆರವೇರಿಸಿದರು. ಈ ಹಿಂದೆ ಈ ಭಾಗಕ್ಕೆ ಶಾಸಕರು ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ಸದರಿ ರಸ್ತೆಯ ಅಭಿವೃದ್ಧಿಗಾಗಿ ಮನವಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಜನರ ಮನವಿಯನ್ನು ಪುರಸ್ಕರಿಸಿದ ಶಾಸಕರು, ₹ 25 ಲಕ್ಷಗಳ ಅನುದಾನ ಒದಗಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಕುಶಾಲಪ್ಪ, ನಾಪೋಕ್ಲು ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ಅರುಣ್ ಬೇಬ, ಹೇಮಾವತಿ ಅರುಣ್ ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯರು, ತಾಲೂಕು ಗ್ಯಾರಂಟಿ ಅನುಷ್ಠಾನ ಸದಸ್ಯರು, ನಾಪೋಕ್ಲು ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.