ಕೂಡಿಗೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ

Feb 10, 2026 - 16:44
 0  192
ಕೂಡಿಗೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ

ಕೂಡಿಗೆ!ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ಮಂಗಳವಾರ (ದಿನಾಂಕ 10-02-2026) ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ವನ್ನು ಆಯೋಜಿಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗು ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞ ಜಂತುಹುಳು ನಿವಾರಣಾ ದಿನದ ಮಹತ್ವದ ಬಗ್ಗೆ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜಂತು ಹುಳದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ, ಅನೀಮಿಯ ಮುಕ್ತ ಕರ್ನಾಟಕ ಕಾರ್ಯಕ್ರಮಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಮಾತ್ರೆ ಸೇವನೆ ಮತ್ತು ಈ ದಿನದ ಮಹತ್ವದ ಬಗ್ಗೆ ವಿವರಿಸಿದರು.

 ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರೇಶ್ ,, ಪ್ರಾಥಮಿಕ ಆರೋಗ್ಯ ಸುರಕ್ಷಾತಾಧಿಕಾರಿಗಳಾದ ಶಕೀನ ಕಾರ್ಯಕ್ರಮಲ್ಲಿ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಎಚ್.ಜೆ.ನಾಗರಾಜ್ ಹಂಡ್ರಂಗಿ , ಕೂಡಿಗೆ‌ ಸರ್ಕಾರಿ ಕ್ರೀಡಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಅಶ್ವಿತ, ಕಾಲೇಜಿನ ಉಪನ್ಯಾಸಕ ವೃಂದದವರು, ಮತ್ತು ಶಾಲೆಯ ಸಹ ಶಿಕ್ಷಕ ವೃಂದದವರು ಹಾಗೂ ರವರು ಮತ್ತು ಶಾಲ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0