ನಾಪೋಕ್ಲು ಪೊಲೀಸ್ ಠಾಣೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಭೇಟಿ

Jan 6, 2026 - 16:56
 0  804
ನಾಪೋಕ್ಲು ಪೊಲೀಸ್ ಠಾಣೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ  ಬಿಂದುಮಣಿ ಭೇಟಿ

 ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್. ಎನ್. ಬಿಂದುಮಣಿ ಅವರು ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಸೋಮವಾರ ಸಂಜೆ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿದ ವರಿಷ್ಠಾಧಿಕಾರಿ ಬಿಂದುಮಣಿ ಅವರು ಪೊಲೀಸ್ ಠಾಣೆಯ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.

ಬಳಿಕ ಅಧಿಕಾರಿ ಮತ್ತು‌ ಸಿಬ್ಬಂದಿಗಳ ಸಭೆ ನಡೆಸಿ ಅಪರಾಧ ತಡೆ ಮತ್ತು ಪತ್ತೆ, ಸಂಚಾರ ವ್ಯವಸ್ಥೆ, ಮಾದಕ ದ್ರವ್ಯ ನಿಗ್ರಹ, ಬೀಟ್ ವ್ಯವಸ್ಥೆ ಮುಂತಾದ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಸೂರಜ್,ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0