ಸೆ.01 ರಂದು ಕರಿಕೆಯಲ್ಲಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ನೂತನ ಕಟ್ಟಡ ಉದ್ಘಾಟನೆ
admincoorgdaily
ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್, 01 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿ ತಾಲ್ಲೂಕು ಕರಿಕೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರಿಕೆ ಗ್ರಾ.ಪಂ.ಅಧ್ಯಕ್ಷರಾದ ಎನ್.ಬಾಲಚಂದ್ರನ್ ನಾಯರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಸರ್ಕಾರದ ಕಾರ್ಯದರ್ಶಿ ಡಿ.ರಂದೀಪ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಯೋಗೇಶ್ ಟಿ., ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.