ಶನಿವಾರಸಂತೆ ನೂತನ ಬಸ್ ನಿಲ್ದಾಣ ಶನಿವಾರ ಲೋಕಾರ್ಪಣೆ

Feb 6, 2026 - 13:33
 0  248
ಶನಿವಾರಸಂತೆ ನೂತನ ಬಸ್ ನಿಲ್ದಾಣ ಶನಿವಾರ ಲೋಕಾರ್ಪಣೆ

ಮಡಿಕೇರಿ; ನಾಳೆ ಶನಿವಾರಸಂತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಬಸ್ ನಿಲ್ದಾಣ ಲೋಕಾರ್ಪಣೆ ಗೊಳ್ಳಲಿದ್ದು ಇದು ಡಾ ಮಂತರ್ ಗೌಡ ರವರ ಪ್ರಯತ್ನ ದಿಂದ ಆದ ಐತಿಹಾಸಿಕ ಸಾಧನೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಬಣ್ಣಿಸಿದ್ದಾರೆ.

 ಇಂದು ಮಡಿಕೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 1.05 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ನಿಲ್ದಾಣ ಆ ಭಾಗದ ಜನರ ನಾಲ್ಕು ದಶಕಗಳ ಕಾಲದ ಕನಸನ್ನು ನನಸಾಗಿಸಿದೆ ಎಂದು ಹೇಳಿದರು. ಜಗತ್ತಿನ ಅಪ್ರತಿಮ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ನವರು ಜನ್ಮಭೂಮಿ ಶನಿವಾರ ಸಂತೆಯ ಮೂಲಕ 70 ಕ್ಕೂ ಹೆಚ್ಚು ಬಸ್ ಪ್ರತಿನಿತ್ಯ ಓಡಾಡುತ್ತಿದ್ದು ಇಲ್ಲಿ ಬಸ್ ನಿಲ್ದಾಣವಿರಲಿಲ್ಲ.

2023 ರ ವಿಧಾನ ಸಭಾ ಚುನಾವಣಾ ಪ್ರಚಾರ ಸಂಧರ್ಭದಲ್ಲಿ ಕಾರ್ಯಕ್ರಮ ಮುಗಿದ ನಂತರ ಜನರನ್ನು ‌ಮಾತನಾಡಿಸುವ ಸಂಧರ್ಭದಲ್ಲಿ ಹಿರಿಯರೊಬ್ಬರು ಬಸ್ ನಿಲ್ದಾಣದ ಬಗ್ಗೆ ಅಂದಿನ ಅಭ್ಯರ್ಥಿಯಾಗಿದ್ದ ಡಾ ಮಂತರ್ ಗೌಡ ರವರ ಬಳಿ ಬೇಡಿಕೆ ಇಟ್ಟಿದ್ದರು ಎಂದು ವಿವರಿಸಿದ ತೆನ್ನಿರ ಮೈನಾ ರವರು ನಂತರ ಶಾಸಕರಾಗಿ ಆ ಬೇಡಿಕೆಯನ್ನು ಈಡೇರಿಸುವ ಮೂಲಕ ಡಾ ಮಂತರ್ ಗೌಡ ನುಡಿದಂತೆ ನಡೆದಿದ್ದಾರೆ ಎಂದು ಶ್ಲಾಘಿಸಿದರು.

ರಸ್ತೆ ಸಾರಿಗೆ ನಿಗಮಕ್ಕೆ 2024 ರಲ್ಲಿ ಜಾಗ ಹಸ್ತಾಂತರ ಮಾಡಿಸಿ ನಂತರದಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರಿಗೆ ಒತ್ತಡ ತಂದು ಅನುದಾನ ಬಿಡುಗಡೆ ಮಾಡಿಸಿ ಅವರಿಂದಲೇ ಶಂಕುಸ್ಥಾಪನೆ ಮಾಡಿಸುವಲ್ಲಿ ಯಶಸ್ವಿಯಾಗಿ ನಾಳೆ ಪೂವಾಹ್ನ 11-30 ಗಂಟೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರ ಘನ ಉಪಸ್ಥಿತಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜ್ ರವರು ನಿಲ್ದಾಣ ಉದ್ಘಾಟನೆ ಮಾಡಲಿದ್ದು ಡಾ ಮಂತರ್ ಗೌಡ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್,ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಒಡೆಯರ್,ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ,ಬೋಜೇಗೌಡ,ಡಾ ಧನಂಜಯ ಸರ್ಜಿ,ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮದ ಉಪಾಧ್ಯಕ್ಷರಾದ ಮೊಹಮ್ಮದ್ ರಿಜ್ವಾನ್ ನವಾಬ್, ಕರ್ನಾಟಕ ಕ್ರೀಡಾ ಪ್ರಾಧೀಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಶನಿವಾರ ಸಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಹರೀಶ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ,ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಕಾಂತರಾಜ್ ಜಿ.ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಅಧಿಕಾರಿಗಳು ಗಣ್ಯರು ನಾಗರೀಕರು ಉಪಸ್ಥಿತರಿರಲಿದ್ದಾರೆ ಎಂದು ತೆನ್ನಿರ ಮೈನಾ ವಿವರಿಸಿದರು.

 ಕೊಡಗು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಹಾಗೂ ಶನಿವಾರ ಸಂತೆ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು. ಬಸ್ ನಿಲ್ದಾಣ ಸ್ಥಾಪನೆಗೆ ಸಂಭಂದಿಸಿದಂತೆ ಡಾ ಮಂತರ್ ಗೌಡ ರವರು ತಾವೇ ಕಡತದೊಂದಿಗೆ ಒಡಾಡಿ ಪರಿಶ್ರಮ ಪಟ್ಟು ಕರ್ತವ್ಯ ನಿರ್ವಹಿಸಿದ್ದು ಅದಕ್ಕಾಗಿ ಕೊಡಗಿನ ಸರ್ವ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ಮಾದಕ ವಸ್ತುಗಳ ಬಳಕೆ ತಡೆಗೆ ಸಂಭಂದಿಸಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಹಲವು ಸಂಘ ಸಂಸ್ಥೆಗಳು ನಾಳೆ ಬೆಳಿಗ್ಗೆ ಮಡಿಕೇರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು.

ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಮಾತನಾಡಿ ಮಡಿಕೇರಿ ಕಸವಿಲೇವಾರಿ ಸಮಸ್ಯೆ ಬಗ್ಗೆ ಶಾಸಕರು ಮಾಹಿತಿ ಪಡೆದ ತಕ್ಷಣವೇ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ ಎಂದು ವಿವರಣೆ ನೀಡಿದರು. ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶ್ರೀಮತಿ ಶಶಿ,ನಗರ ಸಭಾ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ,ಜಿ.ಸಿ.ಜಗದೀಶ್ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0