ಕೆಟ್ಟೋಳ್ಳಿ ಗ್ರಾಮದಲ್ಲಿ ನೂತನ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ

ವಿರಾಜಪೇಟೆ:ತಾಲೂಕಿನ ಕೊಟ್ಟೋಳ್ಳಿ ಗ್ರಾಮದಲ್ಲಿ ಇತ್ತೀಚೆಗೆ 8.5 ಲಕ್ಷದಲ್ಲಿ ನಿರ್ಮಾಣವಾದ ನೂತನ ಕಾಂಕ್ರೀಟ್ ರಸ್ತೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಸಾರ್ವಜನಿಕರ ಬಳಕೆಗೆ ವಿದ್ಯುಕ್ತವಾಗಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಡಿಕೇರಿಯಂಡ ಮಹೇಶ್, ಪಂಚಾಯಿತಿ ಅಧ್ಯಕ್ಷರಾದ ಜೇಫ್ರಿ ಉತ್ತಪ್ಪ, ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್, ಬೂತ್ ಅಧ್ಯಕ್ಷರಾದ ಆಲಿ, ಪಂಚಾಯತಿ ಸದಸ್ಯರಾದ ಇಸ್ಮಾಯಿಲ್, ಪವಿತ್ರ ಹಾಗೂ ಪಕ್ಷದ ಪ್ರಮುಖರು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ತಾಲೂಕು ಘಟಕದ ಅಧ್ಯಕ್ಷರಾದ ರಫೀಕ್, ಕಾರ್ಯಕರ್ತರು ಉಪಸ್ಥಿತರಿದ್ದರು.