Kodagu

ಮಡಿಕೇರಿ ಪೇಟೆ ಶ್ರೀ ರಾಮಮಂದಿರ ದಸರಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

admincoorgdaily

ಮಡಿಕೇರಿ ಪೇಟೆ ಶ್ರೀ ರಾಮಮಂದಿರ ದಸರಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಮಡಿಕೇರಿ: ಮಡಿಕೇರಿಯ ಪೇಟೆ ಶ್ರೀ ರಾಮಮಂದಿರ ದಸರಾ ಸಮಿತಿಯ ಸಭೆಯು 05.08.2026 ರಂದು ಮಡಿಕೇರಿಯ ಹೋಟೆಲ್ ಲೀ ಕೂರ್ಗ್ ನ ಸಭಾಂಗಣದಲ್ಲಿ ಗೌರವ ಅಧ್ಯಕ್ಷರಾದ ಶಿವಮೂರ್ತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಮುಂದಿನ ಕಾರ್ಯಕ್ರಮಗಳು, ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳು, ಸಂಘಟನೆಯ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಸದಸ್ಯರ ಜವಾಬ್ದಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಸರ್ವ ಸದಸ್ಯರ ಒಮ್ಮತದ ನಿರ್ಣಯದಂತೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸುನಿಲ್ ಮುತ್ತಪ್ಪ, ಉಪಾಧ್ಯಕ್ಷರಾಗಿ ಪ್ರಮೋದ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಪೂಜಾರಿ,ಸಂಘಟನಾ ಕಾರ್ಯದರ್ಶಿ ವಿಘ್ನೇಶ್ ಜಿ. ಜಿ ಖಜಾಂಚಿಗಳಾಗಿ ಹೇಮಂತ್ ಮತ್ತು ಅಯ್ಯಪ್ಪ ಆಯ್ಕೆಯಾದರು. ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಅವರ ಅವಧಿಯಲ್ಲಿ ಸಂಘಟನೆಯು ಇನ್ನಷ್ಟು ಅಭಿವೃದ್ಧಿ ಹೊಂದಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.