ಶಾಸಕ ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಸವಿತಾ ಸಮಾಜ ನೂತನ ಅಧ್ಯಕ್ಷರು

ಶಾಸಕ ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಸವಿತಾ ಸಮಾಜ ನೂತನ ಅಧ್ಯಕ್ಷರು

ವಿರಾಜಪೇಟೆ: ಸವಿತಾ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಯಾಂದಿರ ಶಿವಾಜಿ ರವರು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನೂತನ ಅಧ್ಯಕ್ಷರಿಗೆ ಶುಭಕೋರಿದ ಶಾಸಕರು ನಿಮ್ಮ ಕಾಲಾವಧಿಯಲ್ಲಿ ಸವಿತಾ ಸಮಾಜಕ್ಕೆ ಬೇಕಾದ ಎಲ್ಲಾ ಅನುಕೂಲಗಳನ್ನು ಒದಗಿಸಲು ಹಾರೈಸಿದರು. ಇದೇ ಸಂದರ್ಭದಲ್ಲಿ ಅಧಿಕಾರ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಸವಿತಾ ಸಮಾಜದ ಸದಸ್ಯರುಗಳು ಉಪಸ್ಥಿತರಿದ್ದರು.