ಸಂಪಾಜೆ ಬಂಟೋಡಿಯಲ್ಲಿ ನೂತನ ರಸ್ತೆ ಉದ್ಘಾಟನೆ

ಸಂಪಾಜೆ ಬಂಟೋಡಿಯಲ್ಲಿ ನೂತನ ರಸ್ತೆ ಉದ್ಘಾಟನೆ

ಸಂಪಾಜೆ :ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಬಂಟೋಡಿಯಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ಈ ಹಿಂದಿನ ಭೇಟಿ ಸಂದರ್ಭದಲ್ಲಿ ಶಾಸಕರು ಈ ರಸ್ತೆಗೆ ಕಾಂಕ್ರೀಟ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಶಾಸಕರ ಅನುದಾನದಲ್ಲಿ ನಿರ್ಮಾಣವಾದ ಈ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

 ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್, ಸರಕಾರಿ ನಾಮ ನಿರ್ದೇಶಕ ಅಧ್ಯಕ್ಷರುಗಳು/ಸದಸ್ಯರುಗಳು, ಡಿಸಿಸಿ ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಪ್ರಮುಖರು, ಸ್ಥಳೀಯ ಮುಖಂಡರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.