ಶಾಸಕ ಎ.ಮಂಜು ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಶಾಸಕ ಎ.ಮಂಜು ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಈ ಭೇಟಿಯ ಸಂದರ್ಭದಲ್ಲಿ ಉಭಯ ನಾಯಕರು ಪ್ರಸ್ತುತ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕುರಿತು,•ಮುಂಬರುವ ಚುನಾವಣೆಗಳು ಹಾಗೂ ರಾಜಕೀಯ ಸವಾಲುಗಳನ್ನು ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ.ಹಿರಿಯ ಮತ್ತು ಯುವ ನಾಯಕರ ನಡುವೆ ಸಮನ್ವಯ ಸಾಧಿಸಿ ಪಕ್ಷವನ್ನು ಮುನ್ನಡೆಸುವ ಬಗ್ಗೆ ಆತ್ಮೀಯ ಸಮಾಲೋಚನೆ ನಡೆಯಿತು.

ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಹಲವು ರಾಜಕೀಯ ಮುಖಂಡರು ಭಾಗಿಯಾಗಿದ್ದರು.

ಎ.ಮಂಜು ಅವರ ಧರ್ಮಪತ್ನಿ ತಾರಾಮಂಜು,ಮಡಿಕೇರಿ‌ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಹಾಗೂ ಅವರ ಧರ್ಮಪತ್ನಿ ದಿವ್ಯಾ ಮಂಥರ್ ಗೌಡ ಅವರು ಇದ್ದರು.