ಜೆಡಿಎಸ್ ಮಡಿಕೇರಿ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಘಟಕದಿಂದ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಣೆ
admincoorgdaily


ಮಡಿಕೇರಿ; ಜಾತ್ಯಾತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಣೆಯನ್ನು ಹಾಕತ್ತೂರು ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಾಕತ್ತೂರು ಬಿಳಿಗೇರಿ ಗ್ರಾಮ ಪಂಚಾಯತಿ ಸದಸ್ಯರಾದ ಎ. ಎ.ಅಬ್ದುಲ್ ಖಾದರ್, ಮಡಿಕೇರಿ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ , ವಿರಾಜಪೇಟೆ ತಾಲ್ಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೋಕಂಡಲ್ಲಿ, ಕುಶಾಲನಗರ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಶಿಯಾಬುದ್ದೀನ್ ವಿ.ಪಿ.ಎಸ್ ನೆಲ್ಲಿಹುದಿಕೇರಿ ,ಪಕ್ಷದ ಕಾರ್ಯಕರ್ತರಾದ ಎಂ .ಎ. ಇಬ್ರಾಹಿಂ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.