ಯೆಮೆನ್ ನಲ್ಲಿ ನಿಮಿಷಾ ಪ್ರಿಯ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಲಾಗಿದೆ:ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ

ಯೆಮೆನ್ ನಲ್ಲಿ ನಿಮಿಷಾ ಪ್ರಿಯ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಲಾಗಿದೆ:ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ
ನಿಮಿಷಾ ಪ್ರಿಯ

ಹೊಸದಿಲ್ಲಿ: ಯೆಮೆನ್ ಪ್ರಜೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾರ ಗಲ್ಲು ಶಿಕ್ಷೆಯನ್ನು ಯೆಮೆನ್ ನಲ್ಲಿ ತಾತ್ಕಾಲಿಕ ತಡೆಹಿಡಿಯಲಾಗಿದೆ ಎಂದು ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕೇಂದ್ರ ಸರಕಾರದ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, “ಈ ವಿಷಯದ ಕವಿಷಯದ ಕುರಿತು ಸರಕಾರದ ಪ್ರಯತ್ನಗಳು ಮುಂದುವರಿದಿವೆ” ಎಂದು ನ್ಯಾ. ವಿಕ್ರಮ್ ನಾಥ್ ಹಾಗೂ ನ್ಯಾ. ಸಂದೀಪ್ ಮೆಹ್ತಾರನ್ನೊಳಗೊಂಡಿದ್ದ ನ್ಯಾಯಪೀಠಕ್ಕೆ ತಿಳಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ. ನಿಮಿಷ ಪ್ರಿಯ ಗಲ್ಲು ಶಿಕ್ಷೆಯನ್ನು ಜುಲೈ 17ರಂದು ಫಿಕ್ಸ್ ಆಗಿತ್ತು,ಆದರೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕರ್ ಮುಸ್ಲಿಯಾರ್ ಮಧ್ಯಪ್ರವೇಶಿಸಿ ಗಲ್ಲು ಶಿಕ್ಷೆಗೆ ತಾತ್ಕಾಲಿಕ ನೀಡಲು ಪ್ರಯತ್ನಿಸಿ ಯಶಸ್ಸು ಕಂಡಿದ್ದರು.