ಕೋಪಟ್ಟಿ ಚರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

ಕೋಪಟ್ಟಿ ಚರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ  ಕಾರ್ಯಕ್ರಮ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ರವರು ಅಭಿಪ್ರಾಯಪಟ್ಟರು.

ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಮತೋಲನ ಆಹಾರದ ಕುರಿತು ಒಂದು ಕಾರ್ಯಕ್ರಮಕ್ಕೆ ಸೀಮಿತ ವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಾಧಿಸಲು ಮುಂಜಾಗ್ರತೆ ವಹಿಸುವಂತೆ ಮಾಹಿತಿ ನೀಡಿದರು.

 ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ರವರು ಮಾತನಾಡಿ ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದ್ದು ನಮ್ಮ ಸ್ಥಳೀಯ ಮಟ್ಟದಲ್ಲಿ ಸಿಗುವ ಹಸಿರು ಸೊಪ್ಪು, ತರಕಾರಿ, ಕಾಳು, ಹಾಲು, ಮೊಟ್ಟೆ ಹೆಚ್ಚು ಹೆಚ್ಚು ಸೇವಿಸಬೇಕು. ಉದಾಸೀನ ಮಾಡಿದರೆ ಹಲವಾರು ಕಾಯಿಲೆಗಳಿಗೆ ನಾವೇ ಆಸ್ಪಾದ ನೀಡಿದಂತಾಗುತ್ತದೆ ಎಂದರು.

ಸರ್ಕಾರದ ಹಲವಾರು ಯೋಜನೆಗಳ ಮೂಲಕ ಗರ್ಭಿಣಿಯರು, ಮಕ್ಕಳಿಗೆ ಮತ್ತು ರೋಗಿಗಳಿಗೆ ಸೌಲಭ್ಯ ನೀಡುತ್ತಿದ್ದರು ಇನ್ನೂ ರಕ್ತಹೀನತೆ ಯಿಂದ ಸಾವುಗಳು ಸಂಭವಿಸುತ್ತಿರುವುದು ವಿಷಾದನಿಯ ಎಂದ ಅವರು ಆಹಾರ ಪದ್ದತಿ, ಜೀವನ ಶೈಲಿಯಲ್ಲಿ ಬದಲಾವಣೆಯಿಂದ ಸ್ವಸ್ಥ ಆರೋಗ್ಯಕರ ಸಮಾಜ ನಿರ್ಮಾಣ ಸಾದ್ಯವೆಂದರು. ಬಾಲವಿಕಾಸ ಸಮಿತಿ ಅಧ್ಯಕ್ಷರಾದ ದಿವ್ಯ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರ ವ್ಯಾಪ್ತಿಯ ಗರ್ಭಿಣಿಯರಿಗೆ ಮಡಿಲು ತುಂಬಿ ಸೀಮಂತ ನೆರವೇರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಉಮಾಶ್ರೀ ರವರು ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿದರು. ಈ ಸಂದರ್ಭ ಕಾರ್ಯಕ್ರಮ ಜಿಲ್ಲಾ ಎಪಿಡಿ ಮಾಲಿಜಿಸ್ಟ್ ಕಿಶೋರ್, ಹೇಮಂತ್,ಆಶಾ ಕಾರ್ಯಕರ್ತೆ ಚಂದ್ರಾವತಿ, ಶಾಲಾ ಶಿಕ್ಷಕಿಯರಾದ ಪುಷ್ಪವತಿ, ಚೈತ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.