ನಾಪೋಕ್ಲು- ಮಡಿಕೇರಿ ಮುಖ್ಯರಸ್ತೆಯ ಕೊಟ್ಟಮುಡಿ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಓಮಿನಿ ಕಾರು
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ಚಾಲಕನ ನಿಯಂತ್ರಣ ಕಳೆದುಕೊಂಡ ಮಾರುತಿ ಕಾರೊಂದು ರಸ್ತೆ ಬದಿಯ ತೋಟದ ಚರಂಡಿಗೆ ಉರುಳಿಬಿದ್ದ ಘಟನೆ ನಾಪೋಕ್ಲು ಮಡಿಕೇರಿ ಮುಖ್ಯ ರಸ್ತೆಯ ಕೊಟ್ಟಮುಡಿ ಜಂಕ್ಷನ್ ಬಳಿ ಗುರುವಾರ ಸಂಜೆ ನಡೆದಿದೆ.
ಕುಶಾಲನಗರದಿಂದ ಬೆಟ್ಟಗೇರಿ, ಕೊಟ್ಟಮುಡಿ ಮಾರ್ಗವಾಗಿ ಬಲ್ಲಮಾವಟಿ ಗ್ರಾಮದ ನಿವಾಸಿ ನಿತಿನ್ ಎಂಬುವವರು ತಮ್ಮ ಮಾರುತಿ ಓಮಿನಿ ಕಾರಿನಲ್ಲಿ ಹಂದಿಯನ್ನು ಸಾಗಿಸುತ್ತಿದ್ದ ಸಂದರ್ಭ ಕೊಟ್ಟಮುಡಿ ಜಂಕ್ಷನ್ ಬಳಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬದಿಯ ಜೆ ವಿ ಎಸ್ಟೇಟ್ ನ ತೋಟದ ಚೆರಂಡಿಗೆ ಉರುಳಿ ಬಿದ್ದಿದೆ.ಅಪಘಾತದಿಂದ ಕಾರಿನ ಮೆಲ್ಬಾಗ ಹಾಗೂ ಒಂದು ಬದಿಗೆ ಹಾನಿಯಾಗಿದ್ದು ಕಾರಿನ ಚಾಲಕ ನಿತಿನ್ ಹಾಗೂ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಕಾರಿನಲ್ಲಿದ್ದ ಹಂದಿಗೂ ಯಾವುದೇ ಹಾನಿಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ತೋಟದ ಚೆರಂಡಿಗೆ ಉರುಳಿ ಬಿದ್ದ ಕಾರನ್ನು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಿ ತೆರವು ಗೊಳಿಸಲಾಯಿತು.
