ಅ.19ರಂದು ಮಡಿಕೇರಿಯಲ್ಲಿ ಓಣಾಘೋಷಂ, ಓಣಂ ಸದ್ಯ ಕಾರ್ಯಕ್ರಮ
admincoorgdaily
ಮಡಿಕೇರಿ: ಮಲಯಾಳಿಗಳ ಸಂಸ್ಕೃತಿ ಆಚಾರ ವಿಚಾರವನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸುವ ಸಲುವಾಗಿ ಹಿಂದೂ ಮಲಯಾಳಿ ಸಂಘ ಮಡಿಕೇರಿ ವತಿಯಿಂದ ಅ.೧೯ರಂದು ಓಣಾಘೋಷಂ, ಓಣಂ ಸದ್ಯ ಕಾರ್ಯಕ್ರಮ ನಗರದ ಕಾವೇರಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ.ಧಮೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.೧೯ರಂದು ಬೆಳಗ್ಗೆ ೭ ಗಂಟೆಗೆ ಪೂಕಳಂ ಸ್ಪರ್ಧೆ, ೧ ರಿಂದ ೧೦ ವರ್ಷದ ಮಕ್ಕಳಿಗೆ ಛದ್ಮವೇಷ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಂದು ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ಓಣಂ ಆಚರಣ ಸಮಿತಿ ಅಧ್ಯಕ್ಷ ಟಿ.ಕೆ.ಸುದೀರ್ ಮಾತನಾಡಿ, ಅಂದು ಬೆಳಗ್ಗೆ ೧೦.೩೦ ಗಂಟೆಗೆ ಹಿಂದೂ ಮಲಯಾಳಿ ಸಂಘ ಕೆ.ವಿ.ಧಮೇಂದ್ರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಮಾಜಿ ಸ್ಪೀಕರ್ ಮತ್ತು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್, ಶಾಸಕ ಡಾ.ಮಂತರ್‌ಗೌಡ ಇತರರು ಪಾಲ್ಗೊಳ್ಳಲಿದ್ದಾರೆ. ಕರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳನ್ನು ಸನ್ಮಾನ ಗೌರವಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ವಿಜಯ್ ಕುಮಾರ್, ಗೌರವ ಸಲಹೆಗಾರರಾದ ಟಿ.ಆರ್.ವಾಸುದೇವ್, ಪಿ.ಟಿ.ಉಣ್ಣಿಕೃಷ್ಣ, ಪ್ರಮುಖರಾದ ರವಿ ಅಪ್ಪುಕುಟ್ಟನ್ ಉಪಸ್ಥಿತರಿದ್ದರು.