ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ರಜೆ

Feb 24, 2026 - 17:19
 0  351
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ರಜೆ

ಮಡಿಕೇರಿ ಫೆ.24:-ಕರ್ನಾಟಕ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು)ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ, ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸುವಂತೆ ಸರ್ಕಾರದ ಆದೇಶ ಸಂಖ್ಯೆ. ಕಾಇ 466ಎಲ್‍ಇಟಿ 2023, ಬೆಂಗಳೂರು, ದಿನಾಂಕ: 12-11-2025 ರಲ್ಲಿ ಆದೇಶವಿರುತ್ತದೆ.

 ಈ ಆದೇಶದನ್ವಯ ಉದ್ಯೋಗದಾತರು ಪ್ರತೀ ಮಾಸಿಕ ಒಂದು ದಿನದ ಋತುಚಕ್ರದ ರಜೆಯನ್ನು ನೀಡಬೇಕಾಗಿದ್ದು, ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ಮಹಿಳಾ ನೌಕರರು ಆಯಾಯ ತಿಂಗಳ ಋತುಚಕ್ರದ ರಜೆಯನ್ನು ಆಯಾಯ ತಿಂಗಳಿನಲ್ಲಿಯೇ ಬಳಸಿಕೊಳ್ಳಬಹುದಾಗಿದೆ ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಾವೇರಿ ಟಿ. ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0