ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಒಂದು ತಿಂಗಳ ಗಡುವು: ಕುಶಾಲನಗರ ಪುರಸಭೆ ತುರ್ತು ಸಭೆಯಲ್ಲಿ ತೀರ್ಮಾನ

ಕುಶಾಲನಗರ: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಸಲುವಾಗಿ ಕುಶಾಲನಗರ ಪುರಸಭೆಯಲ್ಲಿ ಅಧ್ಯಕ್ಷರಾದ ಜಯಲಕ್ಷ್ಮಿ ಚಂದ್ರುರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಲಾಯಿತು. ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ನಿಷೇಧಿಸುವ ಸಲುವಾಗಿ ಆದೇಶ ಬಂದಿರುವ ಹಿನ್ನಲೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ತುರ್ತು ಸಭೆ ಕರೆದು ಪ್ಲಾಸ್ಟಿಕ್ ನಿಷೇಧದ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.
ಸಾರ್ವಜನಿಕರಿಗೆ 30 ದಿನಗಳ ಗಡುವು ನೀಡುವ ಬಗ್ಗೆ ಸಭೆ ತೀರ್ಮಾನಿಸಲಾಯಿತು. ಆನಂತರ ಪ್ಲಾಸ್ಟಿಕ್ ಬಳಕೆ ಮಾಡಿದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ಣಯ ಕೈಗೊಳ್ಳಲಾಯಿತು. ಹಾಗೆಯೇ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ಅತಿವು ಮೂಡಿಸುವ ದೃಷ್ಟಿಯಿಂದ ಪತ್ರಿಕೆ, ಮಾಧ್ಯಮಗಳಲ್ಲಿ ಪ್ರಚಾರ ಪಡಿಸುವುದು, ಬಿತ್ತಿ ಪತ್ರಗಳನ್ನು ಅಂಟಿಸುವುದು, ಎಲ್ಲಾ ಮಳಿಗೆಗಳಿಗೆ ಕರಪತ್ರ ನೀಡುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಬಗ್ಗೆ ತೀರ್ಮಾನಿಸಲಾಯಿತು. ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸಲು ಮನೆಮನೆಗೆ ಕಸದ ಬುಟ್ಟಿಗಳನ್ನು ನೀಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭ ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿಗಳು ಇದ್ದರು.