ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ನಾಳೆ (ಆಗಸ್ಟ್ 06 ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ (ಆಗಸ್ಟ್ 6 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.