ಸಂಘಟನಾ ಸೃಜನ್ ಅಭಿಯಾನ: ಪೊನ್ನಂಪೇಟೆ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ
ಗೋಣಿಕೊಪ್ಪ:ಎಐಸಿಸಿ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನದ ಭಾಗವಾಗಿ, ಇಂದು ಎಐಸಿಸಿ ಹಾಗೂ ಕೆಪಿಸಿಸಿ ವೀಕ್ಷಕರ ಸಮ್ಮುಖದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮುಖಂಡರುಗಳ ಸಭೆ ನಡೆಯಿತು.
ಗೋಣಿಕೊಪ್ಪಲುವಿನಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಎಐಸಿಸಿ ವೀಕ್ಷಕರ ಹಾಗೂ ಕೋಝಿಕ್ಕೋಡ್ ಜಿಲ್ಲೆಯ ನಾದಾಪುರಮ ತಾಲೂಕಿನ ಶಾಸಕರಾದ ಅಭಿಜಿತ್ ರವರು ವಹಿಸಿದ್ದರು.
ಕೆಪಿಸಿಸಿ ವೀಕ್ಷಕರದ ಆರ್.ವಿ ವೆಂಕಟೇಶ್, ಪದ್ಮನಾಭ, ಶ್ರೀಮತಿ ಮಮತಾ ಗಟ್ಟಿ ಹಾಗೂ ಲಾವಣ್ಯ ಬಳ್ಳಾಳ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರು ಹಾಗೂ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್ ಅವರ ಉಪಸ್ಥಿತಿಯಲ್ಲಿ ಮಾತನಾಡಿದ ಎಐಸಿಸಿ ವೀಕ್ಷಕರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಈ ಅಭಿಯಾನವನ್ನು ಹಮ್ಮಿಕೊಂಡಿದ್ದು, ತಳಮಟ್ಟದಲ್ಲಿ ಪಕ್ಷ ಸಂಘಟಿಸುವುದರೊಂದಿಗೆ ಪಕ್ಷದಲ್ಲಿನ ಒಗ್ಗಟ್ಟು, ಸಾಮ್ಯತೆ ಹಾಗೂ ಇತರ ಎಲ್ಲಾ ಸಂಘಟನಾ ಸಾಮರ್ಥ್ಯದ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮುಂದುವರಿಕೆ/ಬದಲಾವಣೆ ಕುರಿತು ಚರ್ಚಿಸಲು ಈ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ಆ ಪ್ರಯುಕ್ತ ಈ ಭಾಗದ ಪ್ರತಿಯೊಬ್ಬ ಮುಖಂಡನ ವೈಯುಕ್ತಿಕ ಅಭಿಪ್ರಾಯವನ್ನು ಸಂಗ್ರಹಿಸಿ ಅದರ ವರದಿಯನ್ನು ಎಐಸಿಸಿ ಸಮಿತಿಗೆ ನೀಡುವುದಾಗಿ ತಿಳಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷವು ಸದಾ ಜನಪರವಾದ ಒಲವನ್ನು ಹೊಂದಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಬಲಿಷ್ಠ ಪಕ್ಷ ಸಂಘಟನೆಯ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷವು ಈ ನಿರ್ಧಾರವನ್ನು ಕೈಗೊಂಡಿದ್ದು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ಪಕ್ಷದ ಹಿತದೃಷ್ಟಿಯನ್ನು ಮನದಲ್ಲಿಟ್ಟುಕೊಂಡು ವ್ಯಕ್ತಪಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲೆಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು/ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ವಲಯ ಅಧ್ಯಕ್ಷರುಗಳು, ಸದಸ್ಯರುಗಳು,ಬೂತ್ ಅಧ್ಯಕ್ಷರುಗಳು,ಸದಸ್ಯರುಗಳು, ಮುಂಚೂಣಿ ಘಟಕ-ಸೆಲ್ ಗಳ ಅಧ್ಯಕ್ಷರುಗಳು/ಪದಾಧಿಕಾರಿಗಳು, ಜನಪ್ರತಿನಿಧಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು/ಸದಸ್ಯರುಗಳು, ಮಹಿಳಾ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಓ ಬಿ ಸಿ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಎಸ್ ಟಿ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
