ಭಾಗಮಂಡಲ ಕೆವಿಜಿ ಐಟಿಐ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಮಡಿಕೇರಿ:ಕೆವಿಜಿ ಐಟಿಐ ಭಾಗಮಂಡಲದಲ್ಲಿ 2025-27 ನೇ ಸಾಲಿಗೆ ಪ್ರವೇಶ ಪಡೆದ ನೂತನ ತರಬೇತಿದಾರರಿಗೆ ಸ್ವಾಗತ ಕೋರುವ ಮತ್ತು ಪೋಷಕರ ಸಭೆ ನಡೆಯಿತು. ಸಂಸ್ಥೆಯ ಸಭಾಂಗಣದಲ್ಲಿ ಪ್ರಾಂಶುಪಾಲರಾದ ಶ್ರೀಕಾಂತ್ ಕೆವಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಸಂಸ್ಥೆಯ ನೀತಿ ನಿಯಮಗಳ ಬಗ್ಗೆ, ವಿದ್ಯಾರ್ಥಿಗಳ ಮತ್ತು ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಇವರು ಸಂಸ್ಥೆಯ, ತರಬೇತಿಯ ಸಂಪೂರ್ಣ ಮಾಹಿತಿ ನೀಡಿದರು. ಕಿರಿಯ ತರಬೇತಿ ಅಧಿಕಾರಿ ವೆಂಕಟೇಶ್ ಎಂ ಕೆ ಸ್ವಾಗತಿಸಿ, ಜಯಪ್ರಕಾಶ್ ಕೆ ಜಿ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀ ಕೃಷ್ಣಮೂರ್ತಿ ಜೆ ಕಾರ್ಯಕ್ರಮ ನಿರೂಪಿಸಿದರು.