ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿ ಯಾಗಿ, 25 ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನಿಂದ ಕುದುರೆಮುಖದ ನೇತ್ರಾವತಿ ಪೀಕ್ಗೆ ಟ್ರಾಕಿಂಗ್ ಗೆ ಬಸ್ಸಿನಲ್ಲಿ ಯುವಕ-ಯುವತಿಯರು ಬಂದಿದ್ದರು. ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ಮಂದಿ ಟ್ರಕ್ಕಿಂಗ್ ಗಾಗಿ ಬೆಂಗಳೂರಿಂದ ಬರುತ್ತಿದ್ದರು. ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿ ಉರುಳಿ ಬಿದ್ದಿದೆ. ಅಪಘಾತದಲ್ಲಿ 25 ಜನರಿಗೆ ಗಾಯವಾಗಿದೆ . ಇಬ್ಬರ ಸ್ಥಿತಿ ಗಂಭೀರ ಆಗಿದೆ ಎನ್ನಲಾಗುತ್ತಿದೆ. ಗಾಯಾಳುಗಳುನ್ಮು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸ್ ಇಲಾಖೆಯಿಂದ ರಕ್ಷಣಾ ಕಾರ್ಯ ನಡೆದಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.