Kodagu

ಓವರ್‌ಟೇಕ್ ಯತ್ನ: ಆಟೋಗೆ ಖಾಸಗಿ ಬಸ್ ಡಿಕ್ಕಿ, ಚಾಲಕ ಗಂಭೀರ

admincoorgdaily

ಓವರ್‌ಟೇಕ್ ಯತ್ನ: ಆಟೋಗೆ ಖಾಸಗಿ ಬಸ್ ಡಿಕ್ಕಿ, ಚಾಲಕ ಗಂಭೀರ

ಸಿದ್ದಾಪುರ, ಜೂ. 26: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಇಂಜಲಗೆರೆ ಬಳಿ ಓವರ್‌ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು, ಆಟೋದಲ್ಲಿದ್ದ ಮಹಿಳಾ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.