ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಪಿ.ಸಿ ಜನೀಶ್ ಕುಮಾರ್ ಅಧಿಕಾರ ಸ್ವೀಕಾರ
admincoorgdaily

ವಿರಾಜಪೇಟೆ: ವಿರಾಜಪೇಟೆ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಹುದ್ದೆ ತೆರವಾಗಿದ್ದ ಸ್ಥಾನಕ್ಕೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಪಿ.ಸಿ ಜನೀಶ್ ಕುಮಾರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಸುಳ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ.ಸಿ ಜನೀಶ್ ಕುಮಾರ್ ಅವರು ಶುಕ್ರವಾರ ವಿರಾಜಪೇಟೆ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ ಸಂದರ್ಭ ಭೂ ದಾಖಲೆಗಳ ಕಚೇರಿಯ ಎಲ್ಲಾ ಸಿಬ್ಬಂದಿಗಳು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಪೊನ್ನಂಪೇಟೆ ತಾಲೂಕಿಗೆ ಪ್ರತ್ಯೇಕವಾಗಿ ಭೂ ದಾಖಲೆಗಳ ಕಚೇರಿಯನ್ನು ಅಧಿಕೃತವಾಗಿ ಸರಕಾರ ಆರಂಭಿಸದರಿಂದ ಶಾಸಕರ ಒತ್ತಾಯದ ಮೇರೆ ಪೊನ್ನಂಪೇಟೆಯಲ್ಲಿ ಕಚೇರಿಯನ್ನು ಆರಂಭಿಸಲಾಗಿತ್ತು. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿಗೆ ಒಬ್ಬರೇ, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಕಾರ್ಯ ನಿರ್ವಹಿಸಲಿದ್ದಾರೆ.