ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟ ಪಿಡಿಒ

ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟ ಪಿಡಿಒ

ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮನಮೋಹನ್ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಪೊನ್ನಂಪೇಟೆ  ತಾಲೂಕು ಪಂಚಾಯಿತಿಯಲ್ಲಿ ಕಛೇರಿಯಲ್ಲಿ  ಸೇವೆ ಸಲ್ಲಿಸುತ್ತಿದ್ದ ಇವರು ಮನೆಯಿಂದ ಪಟ್ಟಣಕ್ಕೆ ತೆರಳಲು ಕಾರು ಹತ್ತಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟರು.ಮನಮೋಹನ್ ಅವರು ಪ್ರಸ್ತುತ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.