ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ:  ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಡಿಕೇರಿ: ಪ್ರಧಾನಿ ಮೋದಿ ಅವರಿಗೆ ಅವಹೇಳನ ಪ್ರಕರಣ,ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಯಿತು.ಆರೋಪಿಗಳ ಗಡಿ ಪಾರಿಗೆ ಆಗ್ರಹಿಸಿದ್ದಾರೆ. ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಕಲಾವತಿ. ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಅನೇಕ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ನಾಲ್ವರು ಆರೋಪಿಗಳನ್ನು ಕೊಡಗಿನಿಂದ ಗಡಿ ಪಾರು ಮಾಡುವಂತೆ ಪ್ರಮುಖರ ಒತ್ತಾಯಿಸಿದ್ದಾರೆ. ಮಾನವ ಸರಪಳಿ ರಚಿಸಿ ಮಡಿಕೇರಿ ಇಂದಿರಾ ಗಾಂಧಿ ವೃತ್ತದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.