ಪಾಲಿಬೆಟ್ಟ:ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್ ಪೊನ್ನಣ್ಣ: ವಿರಾಜಪೇಟೆ ತಾಲ್ಲೂಕು ಪಿಯು ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಎ.ಎಸ್ ಪೊನ್ನಣ್ಣ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ತಾಲೂಕು ಪಾಲಿಬೆಟ್ಟ ಗ್ರಾಮಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಭಾಗವಹಿಸಿದರು. ತಮ್ಮ ಅನುದಾನದ ₹5 ಲಕ್ಷದಲ್ಲಿ ನಿರ್ಮಾಣಗೊಂಡ ಲೂಡ್ಸ್ ಶಾಲೆಗೆ ತೆರಳುವ ರಸ್ತೆಯನ್ನು ಲೋಕಾರ್ಪಣೆ ಮಾಡಿದ ಬಳಿಕ, ₹8 ಲಕ್ಷದಲ್ಲಿ ನಿರ್ಮಾಣವಾದ ಸರಕಾರಿ ಪದವಿಪೂರ್ವ ಕಾಲೇಜಿಗೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.
ಬಳಿಕ ಶಾಸಕರು, ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ವಾಲಿಬಾಲ್ ಟೂರ್ನಿಯನ್ನು ಉದ್ಘಾಟಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ಕಾಳಪ್ಪ, ಪಂಚಾಯಿತಿ ಸದಸ್ಯರು ನಜರ್, ಕೆಡಿಪಿ ಸದಸ್ಯರು ಗಣೇಶ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಮಲ್ದಾರೆ ಪಂಚಾಯಿತಿ ಸದಸ್ಯರು ಲಲಿತಾ, ಪಕ್ಷದ ಪ್ರಮುಖರು ಮಿಲನ್ ಸುಬ್ಬಯ್ಯ, ಕಾಲೇಜು ಪ್ರಾಂಶುಪಾಲರಾದ ಶೈನಿ, ದರ್ಶನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.