ಪಾಲಿಬೆಟ್ಟ:ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ;ಶಾಸಕ ಎಎಸ್ ಪೊನ್ನಣ್ಣ

ಪಾಲಿಬೆಟ್ಟ:ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ;ಶಾಸಕ ಎಎಸ್ ಪೊನ್ನಣ್ಣ

ಸಿದ್ದಾಪುರ:ಪಾಲಿಬೆಟ್ಟ ಯಂಗ್ ಇಂಡಿಯಾ ಯೂತ್ ಕ್ಲಬ್ ರವರು ಆಯೋಜಿಸಿದ, ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಫೈನಲ್ ಪಂದ್ಯದ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ಫೈನಲ್ ಪಂದ್ಯವನ್ನು ವೀಕ್ಷಿಸಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದಲ್ಲಿ ಇಂತಹ ಒಂದು ಕ್ರೀಡಾಕೂಟವನ್ನು ಆಯೋಜಿಸಿದಕ್ಕೆ ಆಯೋಜಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್ ಪಂದ್ಯಾಟ ವ್ಯಾಪಕ ಮನ್ನಣೆ ಪಡೆಯುತ್ತಿದ್ದು, ಗ್ರಾಮೀಣ ಭಾಗದ ಜನತೆ ಇದರಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ತಮ್ಮ ಕಾಲ್ಚಳಕ ದೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸುವಲ್ಲಿ ಇಂತಹ ಪಂದ್ಯಾಟಗಳು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಿದರು.

 ಇದೇ ಸಂದರ್ಭದಲ್ಲಿ ಯಂಗ್ ಇಂಡಿಯಾ ಯೂತ್ ಕ್ಲಬ್ ನ ಅಭಿವೃದ್ಧಿಗೆ ಶಾಸಕರ ಅನುದಾನ ನೀಡುವುದಾಗಿ ಭರವಸೆ ನೀಡಲಾಯಿತು. ಈ ಸಂದರ್ಭದಲ್ಲಿ ಯಂಗ್ ಇಂಡಿಯಾ ಯುವಕ ಸಂಘದ ಅಧ್ಯಕ್ಷರು ಸಲೀಂ, ಸದಸ್ಯರು, ಪದಾಧಿಕಾರಿಗಳು, ಪಾಲಿಬೆಟ್ಟ ವಲಯ ಅಧ್ಯಕ್ಷರು ಕಾಳಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಗಣೇಶ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷರು ಪ್ರಮೋದ್ ಗಣಪತಿ, ಹಾತ್ತೂರು ವಲಯ ಅಧ್ಯಕ್ಷರು ರೋಷನ್, ಪಕ್ಷದ ಮುಖಂಡರು ಎ ಜೆ ಬಾಬು, ಚೆಕು, ಅನಿಲ್, ಪಾಲಿಬೆಟ್ಟ ಪಂಚಾಯಿತಿ ಸದಸ್ಯರು ನಾಸಿರ್, ಮಾಲ್ದಾರೆ ಪಂಚಾಯಿತಿ ಸದಸ್ಯರು ಮೊಹಮ್ಮದ್ ಆಲೀ, ತೆರೆಸಾ ವಿಕ್ಟರ್, ಹಾಗೂ ಕ್ರೀಡಾ ಪ್ರೇಮಿಗಳು ಉಪಸ್ಥಿತರಿದ್ದರು.