Kodagu

ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಆ.31ರಂದು ನಾಪೋಕ್ಲು ಪಟ್ಟಣದಲ್ಲಿ ವಾಹನ ನಿಲುಗಡೆ ನಿಷೇಧ

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನಲ್ಲಿ ವಿವಿಧ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಆ.31ಭಾನುವಾರ ನಡೆಯಲಿದ್ದು ಇದರಿಂದ ನಾಪೋಕ್ಲು ಪಟ್ಟಣದ ಮುಖ್ಯಬೀದಿಗಳಲ್ಲಿ ವಾಹನದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸುವ ಸಲುವಾಗಿ ಭಾನುವಾರ ಬೆಳಿಗ್ಗೆ 8. ಗಂಟೆಯಿಂದ ರಾತ್ರಿ 12. ಗಂಟೆಯವರೆಗೆ ನಾಪೋಕ್ಲು ಪಟ್ಟಣದ ಮುಖ್ಯ ಬೀದಿಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೆಧಿಸಿದೆ. ಆದಿನ ನಾಪೋಕ್ಲು ಪಟ್ಟಣಕ್ಕೆ ಬರುವ ಎಲ್ಲಾ ವಾಹನದ ಮಾಲೀಕರು ತಮ್ಮ ತಮ್ಮ ವಾಹನಗಳನ್ನು ನಾಪೋಕ್ಲು ನಗರದಿಂದ ಹೊರಭಾಗದಲ್ಲಿ ನಿಲುಗಡೆಗೊಳಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಾಪೋಕ್ಲು ಪೊಲೀಸ್ ಠಾಣಾ ಪ್ರಕಟಣೆಯಲ್ಲಿ ತಿಳಿಸಿದೆ.