Kodagu

ಪೆರಾಜೆ ವಲಯ ಕಾಂಗ್ರೆಸ್ ಸಭೆ

admincoorgdaily

ಪೆರಾಜೆ: ವಲಯ ಕಾಂಗ್ರೆಸ್ ಸಮಿತಿ ಹಾಗೂ ಕಾರ್ಯಕರ್ತರ ಸಭೆಯು ಮಾನ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ರವರ ಅಧ್ಯಕ್ಷತೆಯಲ್ಲಿ, ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪೆರಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಜಯರಾಮ್ ಪೆರುಮುಂಡ, ಕೊಲ್ಯದ ಗಿರಿಶ್, ರಮನಾಥ್ ಬೇಕಲ್, ನೆರವಂಡ ಉಮೇಶ್, ಸುರೇಶ್ ಪೆರುಮುಂಡ, ಟಿ.ಎಂ ಶಹೀದ್, ಸೂರಜ್ ಹೊಸೂರು, ಡಿಸಿಸಿ ಪದಾಧಿಕಾರಿಗಳು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಪಕ್ಷ ಸಂಘಟನೆ, ಪಕ್ಷದಲ್ಲಿನ ಆಂತರಿಕ ವಿಷಯಗಳು ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.