Kodagu

ರಾಜ್ಯದಲ್ಲಿ 474 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತ್ತೀಕರಿಸಲು ಅನುಮತಿ: ಕೊಡಗು ಜಿಲ್ಲೆಗೆ ಎಷ್ಟು ಕರ್ನಾಟಕ ಪಬ್ಲಿಕ್ ಶಾಲೆಗಳು ಘೋಷಣೆಯಾಗಿದೆ ಗೊತ್ತಾ!

admincoorgdaily

474 ಸರ್ಕಾರಿ ಶಾಲೆಗಳನ್ನು ರಾಜ್ಯ ಆಯವ್ಯಯದ ಅನುದಾನ ಮತ್ತು ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸಾಲ ಯೋಜನೆಯಡಿ ಅನುದಾನದಲ್ಲಿ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡಿದ್ದು, ಉಳಿದ 26 ಶಾಲೆಗಳನ್ನು ಮುಂದಿನ ದಿನಗಳಲ್ಲಿ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು ಐದು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಘೋಷಣೆ ಮಾಡಲಾಗಿದೆ.

 ಕುಶಾಲನಗರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ,ಪ್ರೌಢಶಾಲಾ ವಿಭಾಗ ಕುಶಾಲನಗರ,ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರಂಗಾಲ,ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ,ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಘೋಷಣೆ ಮಾಡಲಾಗಿದೆ.ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಒಂದರಿಂದ,ದ್ವಿತೀಯ ಪಿಯುಸಿ ವರೆಗೆ ಒಂದೇ ಶಾಲೆಯಲ್ಲಿ ಶಿಕ್ಷಣ ದೊರೆಯಲಿದೆ.