ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ತಾಯಿ ಮಗುವಿನ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ

ಎಂ.ಬಾಡಗ  ಅಂಗನವಾಡಿ ಕೇಂದ್ರದಲ್ಲಿ ತಾಯಿ ಮಗುವಿನ ಹೆಸರಲ್ಲಿ ಗಿಡ ನೆಡುವ  ಕಾರ್ಯಕ್ರಮ

ಮಡಿಕೇರಿ: ಕಾಂತೂರು ಮುರ್ನಾಡ್ ವ್ಯಾಪ್ತಿಯ ಎಂ.ಬಾಡಗ 1 ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯ ಅಂಗವಾಗಿ ತಾಯಿಯ ಹೆಸರಿನಲ್ಲಿ ಮತ್ತು ಮಕ್ಕಳ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಜಯಂತಿ ಹಾಗೂ ಆಶಾ ಕಾರ್ಯಕರ್ತೆ ಶ್ರೀಮತಿ ಚಂದ್ರಿಕಾ ಮತ್ತು ಮಕ್ಕಳು ಹಾಜರಿದ್ದರು.