ಪಾಲಿಬೆಟ್ಟ:8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಪಾಲಿಬೆಟ್ಟ;ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ.ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿಯ ಪುತ್ರ ಮೃತ ಬಾಲಕ.ಈತ ಅಮ್ಮತ್ತಿ ನೇತಾಜಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
What's Your Reaction?






